varthabharthi


ರಾಷ್ಟ್ರೀಯ

ರಾಷ್ಟ್ರಧ್ವಜಕ್ಕೆ ಅವಮಾನ: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ಪ್ರಕರಣ

ವಾರ್ತಾ ಭಾರತಿ : 15 Sep, 2021

ಮುಝಫ್ಫರ್‌ಪುರ: ಲಕ್ನೋದಲ್ಲಿ ಆಗಸ್ಟ್ 22 ರಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ರಾಷ್ಟ್ರೀಯ ಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಪರಾಶರ್ ಅವರು ಮುಝಫರ್‌ಪುರ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಂತ್ಯಕ್ರಿಯೆಗೂ ಮುನ್ನ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ಬಿಜೆಪಿ ಧ್ವಜವನ್ನು ತ್ರಿವರ್ಣ ಧ್ವಜದ ಮೇಲೆ ಇಟ್ಟಿದ್ದರಿಂದ ಅವರು ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ್ದಾರೆ ಎಂದು ಅವರು ಆರೋಪಿಸಿದರು.

"ಬಿಜೆಪಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಿದೆ. ನಡ್ಡಾ ಕೃತ್ಯವು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನ" ಎಂದು ಅರ್ಜಿದಾರರು ಹೇಳಿದ್ದಾರೆ.

ಅವರು ತಮ್ಮ ಅರ್ಜಿಯನ್ನು ಬೆಂಬಲಿಸಿ ಕೆಲವು ಚಿತ್ರಗಳನ್ನು ಸಹ ಸಲ್ಲಿಸಿದರು.

ನ್ಯಾಯಾಲಯವು ಪ್ರಕರಣದ ಬಗ್ಗೆ ಗಮನಹರಿಸಲು ಅಥವಾ ವಿಚಾರಣೆಗೆ ದಿನಾಂಕವನ್ನು ಇನ್ನಷ್ಟೇ ನಿಗದಿಪಡಿಸಬೇಕಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)