varthabharthi


ಕರ್ನಾಟಕ

ಕೊಳ್ಳೇಗಾಲ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು

ವಾರ್ತಾ ಭಾರತಿ : 15 Sep, 2021

ಚಾಮರಾಜನಗರ, ಸೆ.15: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಕೊಳ್ಳೇಗಾಲ ಪಟ್ಟಣದ ಸಾಮಂದಿಗೇರಿ ಬಡಾವಣೆಯ ನಿವಾಸಿ ಜಮೀಲ್ (35) ಮೃತಪಟ್ಟವರು. ಇವರು ಬ್ಯಾಟರಿ ಶಾಪ್ ಕೆಲಸಗಾರರಾಗಿದ್ದರು. ಸಹಸವಾರ ಕೂಡಾ ತೀವ್ರ ಗಾಯಗೊಂಡಿದ್ದಾರೆ.

ಇವರಿಬ್ಬರು ಮಂಗಳವಾರ ರಾತ್ರಿ 7 ಗಂಟೆ ಸುಮಾರಿಗೆ ಕೆಲಸದ ನಿಮಿತ್ತ ಕೊಳ್ಳೇಗಾಲ ತಾಲೂಕಿನ ಕುಂತೂರು ಕಾರ್ಖಾನೆಯ ಬಳಿಗೆ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಮೈಸೂರು ಕಡೆಯಿಂದ ಅತೀವೇಗವಾಗಿ ಬಂದ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನೂ ತಕ್ಷಣ ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಪಟ್ಟಣದ ಸರಕಾರಿ ಉಪ ವಿಭಾಗ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ದಾರಿಮಧ್ಯೆ ಜಮೀಲ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)