varthabharthi


ಕರ್ನಾಟಕ

'ಇಂದು ಇಲ್ಲವೇ ನಾಳೆ ಹಿಂದೂ ರಾಷ್ಟ್ರ ಕಟ್ಟುತ್ತೇವೆ': ಕೇಂದ್ರ ಸಚಿವ ನಾರಾಯಣಸ್ವಾಮಿ

ವಾರ್ತಾ ಭಾರತಿ : 17 Sep, 2021

ಕೇಂದ್ರ ಸಚಿವ ನಾರಾಯಣಸ್ವಾಮಿ 

ಚಿತ್ರದುರ್ಗ: 'ಬಿಜೆಪಿ ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಕೆಲಸ ಮಾಡುವುದಿಲ್ಲ, ಇಂದು ಇಲ್ಲವೇ ನಾಳೆ  ಹಿಂದೂ ರಾಷ್ಟ್ರ ಕಟ್ಟುತ್ತೇವೆ' ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ. 

ಆರೆಸ್ಸೆಸ್ ಮತ್ತು ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು. 

ನಂಜನಗೂಡಿನ ದೇವಾಲಯ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಈ ಕುರಿತು ಸರ್ಕಾರವೇ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)