varthabharthi


ಕರ್ನಾಟಕ

ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ

ವಾರ್ತಾ ಭಾರತಿ : 17 Sep, 2021

ಬೆಂಗಳೂರು, ಸೆ.17: ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಸೆ.27ರಂದು ಮಧ್ಯಾಹ್ನ 12 ಗಂಟೆಗೆ ನಗರದ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಮಂಡಳಿಯ ಕಚೇರಿಯಲ್ಲಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿದ್ದಾರೆ.

ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದ ಡಾ.ಮುಹಮ್ಮದ್ ಯೂಸುಫ್ ಕಳೆದ ಸಾಲಿನ ಮಾರ್ಚ್‍ನಲ್ಲಿ ಕೋವಿಡ್‍ನಿಂದ ನಿಧನರಾದ ನಂತರ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇದೀಗ ಚುನಾವಣೆ ಘೋಷಣೆಯಾಗಿದೆ. ವಕ್ಫ್ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕ ತನ್ವೀರ್ ಸೇಠ್, ಸರಕಾರದಿಂದ ನಾಮನಿರ್ದೇಶಿತವಾಗಿರುವ ಸದಸ್ಯ ಮೌಲಾನ ಶಾಫಿ ಸಅದಿ, ಮಾಜಿ ಅಧ್ಯಕ್ಷ ಆರ್.ಅಬ್ದುಲ್ ರಿಯಾಝ್ ಖಾನ್ ಆಕಾಂಕ್ಷಿಗಳಾಗಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)