varthabharthi


ಕರಾವಳಿ

ಬೈಂದೂರು ತಾರಾಪತಿಯಲ್ಲಿ ದೋಣಿ ದುರಂತ: ಇಬ್ಬರು ಮೀನುಗಾರರ ಮೃತದೇಹ ಪತ್ತೆ

ವಾರ್ತಾ ಭಾರತಿ : 18 Sep, 2021

ಕುಂದಾಪುರ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದದ ತಾರಾಪತಿ ಸಮುದ್ರ ತೀರದಲ್ಲಿ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಮುಗುಚಿ ಇಬ್ಬರು ನಾಪತ್ತೆಯಾದ ಘಟನೆ ಶುಕ್ರವಾರ ಸಂಜೆ ನಡೆದಿತ್ತು.

ದೋಣಿಯಲ್ಲಿ ಏಳು ಮಂದಿ ಮೀನುಗಾರರಿದ್ದು, ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ನಾಪತ್ತೆಯಾಗಿದ್ದ ಮೀನುಗಾರರಾದ ಶರಣ್ ( 25 ) ಮತ್ತು ಅಣ್ಣಪ್ಪ (30) ಎಂಬವರ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಆಗಮಿಸಿದ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಮೃತರ ಕುಟುಂಬಕ್ಕೆ 6 ಲಕ್ಷ ರೂ. ವೈಯಕ್ತಿಕ ಪರಿಹಾರ ಘೋಷಣೆ ಮಾಡಿದ್ದಾರೆ. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಹಾಗೂ ಬೈಂದೂರು ವೃತ್ತ ನಿರೀಕ್ಷಕರಾದ ಸಂತೋಷ್ ಕಾಯ್ಕಿಣಿ ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)