varthabharthi


ಕರ್ನಾಟಕ

ರಾಜ್ಯದಲ್ಲಿ ಬೃಹತ್ ಲಸಿಕಾ ಮೇಳ ಯಶಸ್ವಿ: ಮುಖ್ಯಮಂತ್ರಿ ಬೊಮ್ಮಾಯಿ ಹರ್ಷ

ವಾರ್ತಾ ಭಾರತಿ : 18 Sep, 2021

ಬೆಂಗಳೂರು, ಸೆ.18: ರಾಜ್ಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಲಸಿಕಾ ಮೇಳ ಯಶಸ್ವಿಯಾಗಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಗುರಿ ಇಟ್ಟುಕೊಳ್ಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.

30 ಲಕ್ಷ ಡೋಸ್ ಪೈಕಿ 29 ಲಕ್ಷ ಡೋಸ್ ಲಸಿಕೆ ಹಾಕಲಾಗಿದೆ. ಇದು ಸಾಧ್ಯವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ನಿರಂತರ ಸಹಕಾರದಿಂದ. ಈ ಮಹತ್ವದ ಸಾಧನೆಯನ್ನು ಸಾಧಿಸಿದ ಆರೋಗ್ಯ ಸೇವಾ ಕಾರ್ಯಕರ್ತರು ಹಾಗೂ ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವಿಯ ಅವರಿಗೂ  ಧನ್ಯವಾದಗಳು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)