ಮೈಸೂರು: ನಟರೊಬ್ಬರ ಫಾರ್ಮ್ ಹೌಸ್ನಲ್ಲಿ ಬಾಲಕಿಯ ಅತ್ಯಾಚಾರ; ಆರೋಪಿ ಬಂಧನ
ಸಾಂದರ್ಭಿಕ ಚಿತ್ರ
ಮೈಸೂರು,ಸೆ.18: ಕನ್ನಡ ಚಲನ ಚಿತ್ರ ನಾಯಕ ನಟರೊಬ್ಬರ ಫಾರ್ಮ್ ಹೌಸ್ನಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೈಸೂರು-ಟಿ.ನರಸೀಪುರ ರಸ್ತೆಯಲ್ಲಿರುವ ನಟರೊಬ್ಬರ ಪಾರ್ಮ್ ಹೌಸ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಕುಟುಂಬದ ಹತ್ತು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಇದೇ ಫಾರ್ಮ್ ಹೌಸ್ನಲ್ಲಿ ಕುದುರಗಳಿಗೆ ಲಾಳ ಕಟ್ಟುತ್ತಿದ್ದ ವ್ಯಕ್ತಿಯೊಬ್ಬ ಆಗಾಗ ಅತ್ಯಾಚಾರ ನಡೆಸುತ್ತಿದ್ದ. ಈ ವಿಚಾರ ಯಾರಿಗೂ ಹೇಳದಂತೆ ಆಕೆಗೆ ಆರೋಪಿ ಬೆದರಿಕೆಯಡ್ಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ನಂತರ ಮಹಿಳಾ ಪೊಲೀಸರಿಗೆ ದೂರು ನೀಡಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆ ಪೊಲಿಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ವಿಚಾರವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸ್ಪಷ್ಟಪಡಿಸಿದ್ದಾರೆ.
Next Story