varthabharthi


ಮಾಹಿತಿ - ಮಾರ್ಗದರ್ಶನ

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 22 Sep, 2021

ಬೆಂಗಳೂರು, ಸೆ.22: ಬೆಂಗಳೂರು ನಗರ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಯಡಿ ಬೆಂ. ಪೂರ್ವ ತಾಲೂಕಿನ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರ ಮೇಲೆ ಅರ್ಹ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ. ಆಸಕ್ತಿಯುಳ್ಳವರು www.anganawadi recruit.kar.nic. in  ಮೂಲಕ ಸಲ್ಲಿಸಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸರಕಾರಿ ಪದವಿ ಪೂರ್ವ ಕಾಲೇಜು ಎದುರು, 3ನೆ ಮುಖ್ಯರಸ್ತೆ, ಕೆ.ಆರ್.ಪುರಂ ಬಡಾವಣೆ, ಕೆ.ಆರ್.ಪುರಂ-560036. ಅಥವಾ ದೂರವಾಣಿ ಸಂಖ್ಯೆ 080-23204490ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂ.ಪೂರ್ವ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)