varthabharthi


ಮಾಹಿತಿ - ಮಾರ್ಗದರ್ಶನ

ಉಡುಪಿ: ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 22 Sep, 2021

ಉಡುಪಿ, ಸೆ.22: ಉಡುಪಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅ.22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -www.tw.kar.nic.in-ಅಥವಾ ದೂ.ಸಂ:0820-2528884 ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)