varthabharthi


ಬೆಂಗಳೂರು

ರಾಜ್ಯದಲ್ಲಿ ಶುಕ್ರವಾರ 789 ಮಂದಿಗೆ ಕೊರೋನ ದೃಢ, 23 ಮಂದಿ ಸಾವು

ವಾರ್ತಾ ಭಾರತಿ : 24 Sep, 2021

ಬೆಂಗಳೂರು, ಸೆ.24: ರಾಜ್ಯದಲ್ಲಿ ಶುಕ್ರವಾರ 789 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 23 ಜನರು ಸೋಂಕಿಗೆ ಬಲಿಯಾಗಿದ್ದು, 1,050 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,71,833ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,706ಕ್ಕೆ ತಲುಪಿದೆ. 

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 13,306ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

23 ಸೋಂಕಿತರು ಬಲಿ: ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 8, ದಕ್ಷಿಣ ಕನ್ನಡ 3, ಮೈಸೂರು 3, ತುಮಕೂರು 1, ಉಡುಪಿ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 789 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 8, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 24, ಬೆಂಗಳೂರು ನಗರ 285, ಬೀದರ್ 2, ಚಾಮರಾಜನಗರ 8, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 23, ಚಿತ್ರದುರ್ಗ 5, ದಕ್ಷಿಣ ಕನ್ನಡ 108, ದಾವಣಗೆರೆ 6, ಧಾರವಾಡ 5, ಗದಗ 1, ಹಾಸನ 18, ಹಾವೇರಿ 1, ಕಲಬುರಗಿ 2, ಕೊಡಗು 37, ಕೋಲಾರ 8, ಮಂಡ್ಯ 19, ಮೈಸೂರು 71, ರಾಮನಗರ 2, ಶಿವಮೊಗ್ಗ 13, ತುಮಕೂರು 29, ಉಡುಪಿ 69, ಉತ್ತರ ಕನ್ನಡ 34, ವಿಜಯಪುರ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 285 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶುಕ್ರವಾರದಂದು 285 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 8 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,44,959 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,125 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,21,390 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)