varthabharthi


ನಿಧನ

ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾನುಭೋಗ್ ಎಚ್.ಬಿ. ರಾಜಪ್ಪ

ವಾರ್ತಾ ಭಾರತಿ : 4 Oct, 2021

ಚಾಮರಾಜನಗರ, ಅ.4: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಗಹಳ್ಳಿ ಗ್ರಾಮದ ಶ್ಯಾನುಭೋಗ್ ಎಚ್.ಬಿ. ರಾಜಪ್ಪ ರವಿವಾರ ಸಂಜೆ ನಿಧನರಾಗಿದ್ದಾರೆ.

 ಪ್ರೌಢಶಾಲಾ ಶಿಕ್ಷಕರಾಗಿ ಹಾಗೂ ಮುಖ್ಯ ಶಿಕ್ಷಕರಾಗಿ ತಾಲೂಕಿನ ಬಾಚಹಳ್ಳಿ, ಹಂಗಳ ಮತ್ತು ತೆರಕಣಾಂಬಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು.

 ತಾಲೂಕಿನ ಮತ್ತು ನಂಜನಗೂಡು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಇವರು ಮೈಸೂರು ಶಿಕ್ಷಣ ಶಿಕ್ಷಕ ತರಬೇತಿ ಕೇಂದ್ರ(ಡಯಟ್)ದಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿ, ಶಿಕ್ಷಣಾಧಿಕಾರಿಗಳಾಗಿ ನಿವೃತ್ತರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)