varthabharthi


ರಾಷ್ಟ್ರೀಯ

ಕಾಶ್ಮೀರದ ಪುಲ್ವಾಮಾದಲ್ಲಿ ಹಿರಿಯ ಜೈಶೆ ಕಮಾಂಡರ್ ಭದ್ರತಾ ಪಡೆಗಳ ಗುಂಡಿಗೆ ಬಲಿ

ವಾರ್ತಾ ಭಾರತಿ : 13 Oct, 2021

ಸಾಂದರ್ಭಿಕ ಚಿತ್ರ

ಶ್ರೀನಗರ,ಅ.13: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರದಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಜೈಶೆ ಮುಹಮ್ಮದ್‌ನ ಹಿರಿಯ ಕಮಾಂಡರ್ ಶಾಮ್ ಸೋಫಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿಯಾಗಿದೆ.

ಅವಂತಿಪೋರದ ಟ್ರಾಲ್ ಪ್ರದೇಶದ ತಿಲ್ವಾನಿ ಮೊಹಲ್ಲಾ ವಗ್ಗಾಡ್ ಎಂಬಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿಗಳನ್ನು ಪಡೆದಿದ್ದ ಭದ್ರತಾ ಪಡೆಗಳು ಪ್ರದೇಶವನ್ನು ನಿರ್ಬಂಧಿಸಿ ಶೋಧ ಕಾರ್ಯಾಚರಣೆಯನ್ನು ಕೈಗೊಂಡಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ್ದು ಗುಂಡಿನ ಕಾಳಗಕ್ಕೆ ಕಾರಣವಾಗಿತ್ತು ಎಂದು ಐಜಿಪಿ ವಿಜಯಕುಮಾರ ತಿಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)