varthabharthi


ಮಾಹಿತಿ - ಮಾರ್ಗದರ್ಶನ

ಬೆಂಗಳೂರು; ಕೇಂದ್ರ ಕಾರಾಗೃಹದಲ್ಲಿ ಸೈಕ್ಯಾಟ್ರಿಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 16 Oct, 2021

ಬೆಂಗಳೂರು, ಅ. 16: ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ 5 ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್ ಹುದ್ದೆಗಳನ್ನು 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯು ಖಾಯಂ ಹುದ್ದೆಯಾಗಿರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿಯಲ್ಲಿ ಗಳಿಸಿದ ಅಂಕಗಳು, ಅನುಭವ ಮತ್ತು Post Graduate degree awarded after completion of course of study of minimum 2 years in Mental Health or Pychiatric Social Work, Approved and recognized by Rehabilitation Council of India(RCI) or, Master’s Degree in Social Work (Medial and Psychiatry), Master’s Degree in Social work ಗಳ ಆಧಾರದ ಮೆಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ವೇತನ ಪ್ರತಿ ತಿಂಗಳಿಗೆ 25 ಸಾವಿರ ರೂ.ನಂತೆ 11 ತಿಂಗಳ ಅವಧಿಗೆ ಮಾತ್ರ ಸೀಮಿತವಾಗಿದ್ದು ಗರಿಷ್ಠ ವಯೋಮಿತಿ 45 ವರ್ಷಗಳು. ಸದರಿ ಹುದ್ದೆಗೆ ಅರ್ಜಿಯನ್ನು ನವೆಂಬರ್ 15ರ ಸಂಜೆ 5.30ರ ಒಳಗಾಗಿ ಮುಖ್ಯ ಅಧೀಕ್ಷಕರು, ಕೇಂದ್ರ ಕಾರಾಗೃಹ, ಪರಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಬೆಂಗಳೂರು-560100 ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-2573 3809 ಅನ್ನು ಸಂಪರ್ಕಿಸಲು ಕೋರಿದೆ.   

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)