varthabharthi


ಕರಾವಳಿ

ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ನಿಧನ

ವಾರ್ತಾ ಭಾರತಿ : 18 Oct, 2021

ಹೊನ್ನಾವರ : ಕುಮಟಾ– ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ (86) ಅವರು ಸೋಮವಾರ ನಿಧನರಾದರು.

ಅವರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಕರ್ಕಿ ಅವರು 1983 ಹಾಗೂ 1994ರಲ್ಲಿ ಎರಡು ಬಾರಿ ಶಾಸಕರಾಗಿದ್ದರು. ಬಿ.ಜೆ.ಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಹೊನ್ನಾವರದ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.

ಉತ್ತರ ಕನ್ನಡದಲ್ಲಿ ಬಿಜೆಪಿ ಸಂಘಟನೆಗೆ ಅವರು ಅಪಾರ ಶ್ರಮಿಸಿದ್ದರು. ಅಂತ್ಯಕ್ರಿಯೆಯು ಮಂಗಳವಾರ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)