varthabharthi


ಕರ್ನಾಟಕ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಈ ತಂತ್ರ ಫಲಿಸದು: ಯಡಿಯೂರಪ್ಪ

ವಾರ್ತಾ ಭಾರತಿ : 19 Oct, 2021

ಶಿವಮೊಗ್ಗ, ಅ.19:  ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಲೆ ಏರಿಕೆಯ ವಿಚಾರವನ್ನು ದೊಡ್ಡದಾಗಿ ಮಾಡಿ ಮತ ಸೆಳೆಯಲು ಮುಂದಾಗಿದೆ. ಆದರೆ ಇದು ಫಲಿಸದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಎಲ್ಲಾ ಕಾಲದಲ್ಲೂ ಆಗುತ್ತದೆ. ಬೆಲೆ ಏರಿಕೆ ಯಾವ ಕಾರಣಕ್ಕೆ ಆಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಇದು ಉಪ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳು ಉಪ ಚುನಾವಣೆಯ ಗೆಲುವಿಗೆ ಕಾರಣವಾಗಲಿದೆ ಎಂದ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರು ಗೆಲುವು ಸಾಧಿಸಲಿದೆ. ಅಭಿವೃದ್ದಿ ಕಾರ್ಯಗಳೇ ನಮಗೆ ದೊಡ್ಡ ಶಕ್ತಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಳೆಯಿಂದ ಸಿಂದಗಿಯಲ್ಲಿ ನಾಲ್ಕು ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸುತ್ತೇನೆ ಎಂದು ತಿಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)