varthabharthi


ಕರ್ನಾಟಕ

ಪ್ರಧಾನಿ ಮೋದಿ ವಿರುದ್ಧದ ಟ್ವೀಟ್ ಡಿಲೀಟ್ ಮಾಡಿದ ರಾಜ್ಯ ಕಾಂಗ್ರೆಸ್

ವಾರ್ತಾ ಭಾರತಿ : 19 Oct, 2021

ಬೆಂಗಳೂರು, ಅ.19: ಪ್ರಧಾನಿ ನರೇಂದ್ರ ಮೋದಿಯವರನ್ನು ‘ಹೆಬ್ಬೆಟ್ಟು ಗಿರಾಕಿ’ ಎಂದು ಟ್ವೀಟ್ ಮೂಲಕ ಟೀಕಿಸಿದ್ದ ರಾಜ್ಯ ಕಾಂಗ್ರೆಸ್ ಇದೀಗ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದೆ. ಅಲ್ಲದೆ, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ,

ರಾಜಕೀಯ ಟೀಕೆ ಕೂಡಾ ಸಭ್ಯ ಮತ್ತು ಸಂಸದೀಯ ಭಾಷೆಯನ್ನು ಹೊಂದಿರಬೇಕು. ಇದು ಕೆಪಿಸಿಸಿ ಟ್ವಿಟರ್ ಹ್ಯಾಂಡಲ್ ಮೂಲಕ ಅನನುಭವಿ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರು ಮಾಡಿರುವ ಟ್ವೀಟ್ ಆಗಿದೆ. ಇದು ವಿಷಾದನೀಯ ಮತ್ತು ಇದನ್ನು ಹಿಂದೆಗೆದುಕೊಳ್ಳಲಾಗಿದೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

ಏನಿದು ಟ್ವೀಟ್?
''ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಪ್ರಧಾನಿ ನರೇಂದ್ರ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ, ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ. ‘ಹೆಬ್ಬೆಟ್ಟು ಗಿರಾಕಿ’ ಮೋದಿಯಿಂದ  ದೇಶ ನರಳುತ್ತಿದೆ'' ಎಂದು ಕಾಂಗ್ರೆಸ್  ಟ್ವೀಟ್ ಮೂಲಕ ವ್ಯಂಗ್ಯವಾಡಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)