varthabharthi


ಮಾಹಿತಿ - ಮಾರ್ಗದರ್ಶನ

ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 12 Nov, 2021

ಮಂಗಳೂರು, ನ.12: ಪುತ್ತೂರು ತಾಲೂಕಿನ ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 7 ವರ್ಷ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ ವಿವರ, ಅವಧಿ ಮತ್ತು ಪುರಾವೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ನ.15 ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿಯ ಕಚೇರಿಯ ಕಾನೂನು ಶಾಖೆಯಲ್ಲಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)