varthabharthi


ಕ್ರೀಡೆ

ರಾಹುಲ್, ರೋಹಿತ್ ಅರ್ಧಶತಕ

ನ್ಯೂಝಿಲ್ಯಾಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ

ವಾರ್ತಾ ಭಾರತಿ : 19 Nov, 2021

Photo: BCCI

ರಾಂಚಿ, ನ.19: ಆರಂಭಿಕ ಬ್ಯಾಟ್ಸ್ ಮನ್ ಗಳಾದ ಕೆ.ಎಲ್. ರಾಹುಲ್(65, 49 ಎಸೆತ, 6 ಬೌಂಡರಿ, 2 ಸಿಕ್ಸರ್ ) ಹಾಗೂ ರೋಹಿತ್ ಶರ್ಮಾ(55, 36 ಎಸೆತ, 1 ಬೌಂಡರಿ, 5 ಸಿಕ್ಸರ್ ) ಅರ್ಧಶತಕ ಸಹಾಯದಿಂದ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧದ 2ನೇ ಟ್ವೆಂಟಿ-20 ಅಂತರ್ ರಾಷ್ಟ್ರೀಯ ಪಂದ್ಯವನ್ನು 7 ವಿಕೆಟ್ ಗಳ ಅಂತರದಿಂದ ಗೆದ್ದುಕೊಂಡಿದೆ.

ಈ ಗೆಲುವಿನ ಮೂಲಕ ಭಾರತವು 3 ಪಂದ್ಯಗಳ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ 2-0 ಅಂತರದಿಂದ ಗೆದ್ದುಕೊಂಡಿದೆ.

ಗೆಲ್ಲಲು 154 ರನ್ ಗುರಿ ಬೆನ್ನಟ್ಟಿದ ಭಾರತವು 17.2 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು. ರೋಹಿತ್ ಹಾಗೂ ರಾಹುಲ್ ಮೊದಲ ವಿಕೆಟ್ ಗೆ 117  ರನ್ ಸೇರಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿದರು.

3ನೇ ಕ್ರಮಾಂಕದಲ್ಲಿ ಆಡಿದ ವೆಂಕಟೇಶ್ ಅಯ್ಯರ್(12) ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್(12) ಔಟಾಗದೆ ಉಳಿದರು. ನ್ಯೂಝಿಲ್ಯಾಂಡ್ ಪರ ನಾಯಕ ಟಿಮ್ ಸೌಥಿ (3-16) ಯಶಸ್ವಿ ಬೌಲರ್ ಎನಿಸಿಕೊಂಡರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)