varthabharthi


ಕ್ರೀಡೆ

ಸೈಯದ್ ಮುಶ್ತಾಕ್ ಅಲಿ ಟ್ರೋಫಿ ಫೈನಲ್

ಕರ್ನಾಟಕದ ವಿರುದ್ಧ ಕೊನೆಯ ಎಸೆತದಲ್ಲಿ ಶಾರೂಖ್ ಖಾನ್ ಸಿಕ್ಸರ್: ತಮಿಳುನಾಡು ಚಾಂಪಿಯನ್

ವಾರ್ತಾ ಭಾರತಿ : 22 Nov, 2021

ಹೊಸದಿಲ್ಲಿ: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ರೋಚಕ ಫೈನಲ್ ಪಂದ್ಯದಲ್ಲಿ ಕರ್ನಾಟಕವನ್ನು ಸೋಲಿಸಿ ತಮಿಳುನಾಡು ಚಾಂಪಿಯನ್ ಪಟ್ಟ ಅಲಂಕರಿಸಿದೆ. 

ತಮಿಳುನಾಡು ತಂಡದ ಆಟಗಾರ ಶಾರುಖ್ ಖಾನ್ ಅಂತಿಮ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಮಿಳುನಾಡು ತಂಡವು ಕರ್ನಾಟಕ ತಂಡ ನೀಡಿದ್ದ 152 ರನ್ ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಲು ನೆರವಾದರು.

ತಮಿಳುನಾಡು ಸತತ ಎರಡನೇ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇಂಡಿಯನ್ ಪ್ರೀಮಿಯರ್ ಟಿ20 ಸ್ಪರ್ಧೆಯಲ್ಲಿ ಹಾಲಿ ಚಾಂಪಿಯನ್ ಆಗಿ ಪ್ರವೇಶಿಸಿದ್ದ ತಮಿಳುನಾಡು ಸತತ ಮೂರನೇ ಫೈನಲ್‌ಗೆ ಅರ್ಹತೆ ಪಡೆದಿತ್ತು.‌

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)