ಕಾಪು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು
ಅಂಗಡಿಗೆ ಭಾಗಶಃ ಹಾನಿ, ಸಣ್ಣಪುಟ್ಟ ಗಾಯದೊಂದಿಗೆ ಪಾರಾದ ಮಾಲಕ
ಕಾಪು, ನ.25: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಸ್ವಾಗತ ನಗರದ ಬಳಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಶಿರ್ವ ಕಡೆಯಿಂದ ಕಾಪುವಿನತ್ತ ತೆರಳುತ್ತಿದ್ದ ಕುಂದಾಪುರದ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಇದರಿಂದ ಅಂಗಡಿಯ ಒಂದು ಪಾರ್ಶ್ವದ ಗೋಡೆ ನೆಲಕ್ಕುರುಳಿದೆ. ಈ ವೇಳೆ ಅಂಗಡಿಯಲ್ಲಿದ್ದ ಮಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.
ಢಿಕ್ಕಿಯಾದ ರಭಸಕ್ಕೆ ಕಾರು ಕೂಡಾ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.