varthabharthi


ರಾಷ್ಟ್ರೀಯ

ಮೂರು ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ

ವಾರ್ತಾ ಭಾರತಿ : 1 Dec, 2021

ಹೊಸದಿಲ್ಲಿ: ಹರ್ಯಾಣ, ಪಂಜಾಬ್ ಹಾಗೂ ಪಶ್ಚಿಮ ಉತ್ತರಪ್ರದೇಶದ ರೈತರ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಸಹಿ ಹಾಕಿದ್ದಾರೆ.

ಸೋಮವಾರ ಚಳಿಗಾಲ ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಉಭಯ ಸದನಗಳಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ತರಾತುರಿಯಲ್ಲಿ ಅಂಗೀಕರಿಸಲಾಯಿತು. ಪ್ರತಿಪಕ್ಷಗಳ ಚರ್ಚೆಯ ಬೇಡಿಕೆಯ ನಡುವೆಯೇ ಲೋಕಸಭೆಯಲ್ಲಿ ಕೇವಲ 4 ನಿಮಿಷಗಳಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು.

ರಾಜ್ಯಸಭೆಯಲ್ಲೂ ಅಲ್ಪ ಕಾಲದ ಚರ್ಚೆಯ ನಂತರ ಮಸೂದೆ ಅಂಗೀಕಾರವಾಗಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)