varthabharthi


ಕರ್ನಾಟಕ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ: ಸಾಧಕ ಬಾಧಕ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ

ವಾರ್ತಾ ಭಾರತಿ : 1 Dec, 2021

ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.1: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಸಾಧಕ ಬಾಧಕದ ಬಗ್ಗೆ ಮೌಲ್ಯಮಾಪನಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 

ರೈಲು ಯೋಜನೆ ಪ್ರಶ್ನಿಸಿ ಪ್ರಾಜೆಕ್ಟ್ ವೃಕ್ಷ ಫೌಂಡೇಷನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿದೆ.

ಉತ್ತರ ಕರ್ನಾಟಕ ಹಾಗೂ ಕರಾವಳಿಗೆ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆಯಾಗಿರುವ ಈ ರೈಲು ಮಾರ್ಗ ಪ್ರಸ್ತಾವನೆಯನ್ನು 1998ರಲ್ಲೆ ಸಲ್ಲಿಸಲಾಗಿತ್ತು. ಆಗಿನಿಂದಲೂ ಈ ಯೋಜನೆಗೆ ಪರಿಸರವಾದಿಗಳು ಹಾಗೂ ವನ್ಯಜೀವಿ ಸಂರಕ್ಷಕರ ವಿರೋಧವಿದೆ. ಒಂದೊಮ್ಮೆ ಯೋಜನೆ ಜಾರಿಯಾದರೆ ಉತ್ತರ ಕನ್ನಡದ ಪಶ್ಚಿಮ ಘಟ್ಟದ ಭಾಗದಲ್ಲಿ 2.2 ಲಕ್ಷ ಮರಗಳ ಮಾರಣ ಹೋಮವಾಗುತ್ತದೆ.

ರೈಲು ಮಾರ್ಗ ಹಾದು ಹೋಗುವ ಕಾಡಿನ ಪ್ರದೇಶ ಪರಿಸರದ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿದೆ. ಒಂದು ವೇಳೆ ಯೋಜನೆಗೆ ಅನುಮೋದನೆ ದೊರೆತರೆ ಅಳಿವಿನಂಚಿನಲ್ಲಿರುವ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಸಂಚಕಾರ ಬರಲಿದೆ.

ಅಲ್ಲದೇ ಕಾಳಿ ಕಣಿವೆಯಲ್ಲಿರುವ ನದಿಗಳ ಸಹಜ ಹರಿವಿನ ಮೇಲೂ ಪರಿಣಾಮ ಬೀರಲಿದೆ. ಇದು ಸ್ವಾಭಾವಿಕ ಪರಿಸರ ವ್ಯವಸ್ಥೆಗೆ ಧಕ್ಕೆಯಾಗಲಿದೆ. ಹವಾಮಾನ ಬದಲಾವಣೆಗೂ ಕಾರಣವಾಗಲಿದೆ ಎಂಬುದು ಪರಿಸರವಾದಿಗಳು ಮತ್ತು ವನ್ಯಜೀವಿ ಪ್ರಿಯರ ವಾದವಾಗಿದೆ. ಹೀಗಾಗಿ ಈ ಯೋಜನೆ ಬಗ್ಗೆ ವಿರೋಧವಿತ್ತು. ಸದ್ಯ ಇದೀಗ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು ರೈಲು ಮಾರ್ಗದ ಮೌಲ್ಯಮಾಪನ ನಡೆಸಿ ವರದಿಗೆ ಸೂಚಿಸಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)