varthabharthi


ಕರ್ನಾಟಕ

ನೂತನ ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿ

ವಾರ್ತಾ ಭಾರತಿ : 1 Dec, 2021

ಬೆಂಗಳೂರು, ಡಿ.1: ಐಎಎಸ್ ಅಧಿಕಾರಿಗಳಾಗಿ ಭಡ್ತಿ ಪಡೆದಿರುವ ರಾಜ್ಯದ 11 ಮಂದಿ ಅಧಿಕಾರಿಗಳಿಗೆ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

ತೋಟಗಾರಿಕೆ ಇಲಾಖೆಯ ಹೆಚ್ಚುವರಿ ನಿರ್ದೇಶಕ(ಆಡಳಿತ)-ಎನ್.ಚಂದ್ರಶೇಖರ್, ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಹಾಗೂ ವಿಜ್ಞಾನ, ತಂತ್ರಜ್ಞಾನ ಇಲಾಖೆಯ ನಿರ್ದೇಶಕ(ತಾಂತ್ರಿಕ)-ಎ.ಬಿ.ಬಸವರಾಜು, ವೈದ್ಯಕೀಯ ಶಿಕ್ಷಣ ಇಲಾಖೆಯ ಸರಕಾರದ ಜಂಟಿ ಕಾರ್ಯದರ್ಶಿ-ಎಂ.ಶಿಲ್ಪಾ, ಕಂದಾಯ ಇಲಾಖೆಯ ಭೂಮಿ ನಿಯಂತ್ರಣ ವಿಭಾಗದ ವಿಶೇಷ ಜಿಲ್ಲಾಧಿಕಾರಿ-ಎಸ್.ನವೀನ್ ಕುಮಾರ್ ರಾಜು.

ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ-ಡಾ.ಎಂ.ಮಹೇಶ್, ರಾಜ್ಯ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ-ಎಸ್.ಜೆ.ಸೋಮಶೇಖರ್, ರಾಜ್ಯ ಖನಿಜ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕಿ-ಡಾ.ಬಿ.ವಿ.ವಾಸಂತಿ ಅಮರ್, ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ-ಜಿ.ಲಿಂಗಮೂರ್ತಿ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ-ಎಸ್.ರಂಗಪ್ಪ, ಹೊಸದಿಲ್ಲಿಯ ಕರ್ನಾಟಕ ಭವನದ ಸ್ಥಾನಿಕ ಉಪ ಆಯುಕ್ತ-ಎಚ್.ಪ್ರಸನ್ನ ಹಾಗೂ ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಕಾರ್ಯಕಾರಿ ನಿರ್ದೇಶಕರನ್ನಾಗಿ ಇಬ್ರಾಹಿಮ್ ಮೈಗೂರ್ ಅವರನ್ನು ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

ವರ್ಗಾವಣೆ: ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದ ಎಸ್.ಎನ್.ಬಾಲಚಂದ್ರ ಅವರನ್ನು ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ-2ಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)