varthabharthi


ಕರಾವಳಿ

ತಲಪಾಡಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಬಂಧನ

ವಾರ್ತಾ ಭಾರತಿ : 2 Dec, 2021

ಉಳ್ಳಾಲ, ಡಿ.2: ತಲಪಾಡಿಯಲ್ಲಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಹಾಗೂ ಉಚ್ಚಿಲದಲ್ಲಿ 19 ಹರೆಯದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಸಿಸಿಬಿ ಹಾಗೂ ಉಳ್ಳಾಲ ಠಾಣಾ ಇನ್ ಸ್ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಗುರುವಾರ  ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ರಾಝಿಕ್(22) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ವೇಳೆ 14ರ ಹರೆಯದ ವಿದ್ಯಾರ್ಥಿನಿ ತನ್ನ ತಂಗಿಯೊಂದಿಗೆ ತಲಪಾಡಿ ಅಲಂಕಾರ ಗುಡ್ಡೆಯಿಂದ ಕಾಲ್ನಡಿಗೆಯ ಮೂಲಕ ತಲಪಾಡಿ ಚೆಕ್ ಪೋಸ್ಟ್ ರಸ್ತೆಯಾಗಿ ಶಾಲೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ಆಕೆಯ ಕೈ ಎಳೆದು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಲ್ಲದೆ ಅದೇ ದಿನ ಬೆಳಗ್ಗೆ ಉಚ್ಚಿಲದಲ್ಲಿ ಕಾಲೇಜಿಗೆ ಹೋಗುತ್ತಿದ್ದ 19 ಹರೆಯದ ಯುವತಿಯೊಬ್ಬಳಿಗೆ ಯುವಕನೋರ್ವ ಕಿರುಕುಳ ನೀಡಿದ್ದ ಬಗ್ಗೆ ಸಂತ್ರಸ್ತೆ ಪೊಲೀಸ್ ದೂರು ನೀಡಿದ್ದಳು. ಎರಡೂ ದೂರಿನ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪ್ರಕರಣಕ್ಕೆ ಸಂಬಂಧಿಸಿ ಸಿಸಿಟಿವಿ ಆಧಾರದಲ್ಲಿ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಗುರುವಾರ ಬೆಳಗ್ಗೆ ಕೆ.ಸಿ.ರೋಡ್ ನಲ್ಲಿ ಆರೋಪಿ ರಾಶಿಕ್ ನನ್ನ ಬಂಧಿಸಿದ್ದಾರೆ. ಈತನ ವಿರುದ್ಧ ಪೊಕ್ಸೊ ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)