ಅಲೆಮಾರಿ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಉಡುಪಿ, ಡಿ.2: ಜಿಲ್ಲಾ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲೆಮಾರಿ ಜನಾಂಗದ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2022 ಜ.10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kaad. karnataka.gov.iಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story