varthabharthi


ಕರಾವಳಿ

ಡಿ.10ರಂದು ತ್ರೈಮಾಸಿಕ ಅಂಚೆ ಅದಾಲತ್

ವಾರ್ತಾ ಭಾರತಿ : 2 Dec, 2021

ಉಡುಪಿ, ಡಿ.2: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿ.10ರಂದು ಬೆಳಗ್ಗೆ 10 ಗಂಟೆಗೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಡಿ.8ರ ಒಳಗೆ ಅಂಚೆ ಅಧೀಕ್ಷಕರ ಕಚೇರಿಗೆ ಕಳುಹಿಸಬೇಕು.

ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು, ಸಮಸ್ಯೆ ಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)