varthabharthi


ಕರಾವಳಿ

ದ.ಕ. ಜಿಲ್ಲೆಯಲ್ಲಿ 20 ಮಂದಿಗೆ ಕೋವಿಡ್ ಪಾಸಿಟಿವ್

ವಾರ್ತಾ ಭಾರತಿ : 2 Dec, 2021

ಮಂಗಳೂರು, ಡಿ.2: ದ.ಕ.ಜಿಲ್ಲೆಯಲ್ಲಿ ಗುರುವಾರ 20 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 17 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.27 ದಾಖಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ 22,59,554 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 21,43,640 ನೆಗೆಟವ್ ಮತ್ತು 1,15,914 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,079 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,694 ಮಂದಿ ಈವರೆಗೆ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 141 ಸಕ್ರಿಯ ಪ್ರಕರಣವಿದೆ.

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 88,976 ಪ್ರಕರಣ ದಾಖಲಿಸಿ, 1,07,90,470 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)