varthabharthi


ಕರಾವಳಿ

ಪ್ಯಾಸೆಂಜರ್ ರೈಲು ಓಡಾಟಕ್ಕೆ ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ

ವಾರ್ತಾ ಭಾರತಿ : 2 Dec, 2021

ಮಂಗಳೂರು, ಡಿ.2: ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲ್ವು ಸಂಚಾರ ಸ್ಥಗಿತದಿಂದ ಪುತ್ತೂರಿನಿಂದ ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಶೀಘ್ರ ರೈಲು ಸಂಚಾರ ಪುನರಾರಂಭಿಸಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಗುರುವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಎನ್‌ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಾಬೆ, ಪ್ರಧಾನ ಕಾರ್ಯದರ್ಶಿ ಸುಹಾನ ಅಳ್ವ, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಲ್ವಾನ್ ಅಮ್ಮೆಮಾರ್, ಅಬ್ದುಲ್ ರಾಝಿ,ಶಾನ್ ಸಿರಿ, ನಜೀಬ್ ಮಂಚಿ ಮತ್ತಿತರರು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)