varthabharthi


ಕರಾವಳಿ

ಎಸ್ ವೈ ಎಸ್ ಉಳ್ಳಾಲ ಸೆಂಟರ್: ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾ ಭಾರತಿ : 2 Dec, 2021

ಉಳ್ಳಾಲ: ಎಸ್ ವೈ ಎಸ್ ಉಳ್ಳಾಲ ಸೆಂಟರ್ ವಾರ್ಷಿಕ ಮಹಾಸಭೆ ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ರವರ ಅಧ್ಯಕ್ಷತೆಯಲ್ಲಿ ಮೇಲಂಗಡಿಯ ತಾಜುಲ್ ಉಲಮಾ ಆಡಿಟೋರಿಯಂನಲ್ಲಿ ಇತ್ತೀಚೆಗೆ ನಡೆಯಿತು.

ಸೆಂಟರ್ ಗೌರವಾಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಸಭೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ದ.ಕ ಜಿಲ್ಲಾಧ್ಯಕ್ಷರಾದ ಅಶ್ ಅರಿಯ್ಯ ಮುಹಮ್ಮದ್ ಅಲಿ ಸಖಾಫಿ ಮಾತನಾಡಿ ಎಸ್ ವೈ ಎಸ್ ಹೆಮ್ಮರವಾಗಿ ಬೆಳೆಯಲು ನಿಮಿತ್ತರಾದ ಎಸ್ ವೈ ಎಸ್  ಪೂರ್ವಿಕ ನೇತಾರರ ಕಠಿಣ ಪರಿಶ್ರಮದ ಕುರಿತು ಸಭೆಯಲ್ಲಿ ತಿಳಿಸಿದರು.

ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸ್ಹಾಖ್ ಪೇಟೆ ವರದಿ ಹಾಗು ಸೆಂಟರ್ ಕೋಶಾಧಿಕಾರಿ ಅಬ್ದುಸ್ಸಮದ್ ಮುಕ್ಕಚ್ಚೇರಿ ಲೆಕ್ಕಪತ್ರ ಮಂಡಿಸಿದರು. ಬಳಿಕ ಚುನಾವಣಾ ವೀಕ್ಷಕರಾಗಿ ಆಗಮಿಸಿದ ಇಸ್ಹಾಖ್ ಝುಹ್ರಿಯವರ ನೇತ್ರತ್ವದಲ್ಲಿ ಹಾಲಿ ಸಮಿತಿಯನ್ನು ವಿಸರ್ಜಿಸಿ, ನೂತನ ಸಮಿತಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ಗೌರವಾಧ್ಯಕ್ಷರಾಗಿ ಸಯ್ಯಿದ್ ಜಲಾಲ್ ತಂಗಲ್, ನೂತನಾಧ್ಯಕ್ಷರಾಗಿ ಪಿ ಎಸ್ ಎಂ ಶಿಹಾಬುದ್ದೀನ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ಇಸ್ಹಾಖ್ ಪೇಟೆ, ಕೋಶಾಧಿಕಾರಿಯಾಗಿ ಬಶೀರ್ ಸಖಾಫಿ ಉಳ್ಳಾಲ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಹನೀಫ್ ಹಾಜಿ ಉಳ್ಳಾಲ, ದಅವಾ ಕಾರ್ಯದರ್ಶಿಯಾಗಿ ಮನ್ಸೂರ್ ಹಳೆಕೋಟೆ, ಸಂಘಟನಾ ಕಾರ್ಯದರ್ಶಿ ಯಾಗಿ ಫಾರೂಖ್ ಅಬ್ಬಾಸ್ ಹಾಜಿ ಕೋಟೆಪುರ, ಇಸಾಬಃ ಕಾರ್ಯದರ್ಶಿಯಾಗಿ ಶರೀಫ್ ಮಂಚಿಲ, ಕಾರ್ಯಕ್ರಮ ನಿರ್ವಹಣಾ ಕಾರ್ಯದರ್ಶಿಯಾಗಿ ಇಲ್ಯಾಸ್ ಕೈಕೋ, ಸಾಂತ್ವನ ಕಾರ್ಯದರ್ಶಿಯಾಗಿ ಅಬ್ದುರ್ರಹ್ಮಾನ್ ಅಕ್ಕರೆಕೆರೆ, ಮಾಧ್ಯಮ ಕಾರ್ಯದರ್ಶಿ ಯಾಗಿ ನವಾಝ್ ಸಖಾಫಿ ಉಳ್ಳಾಲ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ 13 ಮಂದಿಯನ್ನು ಆರಿಸಲಾಯಿತು. ಬಳಿಕ ನೂತನಾಧ್ಯಕ್ಷರಾಗಿ ಆಯ್ಕೆಯಾದ ಶಿಹಾಬುದ್ದೀನ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಮಾತನಾಡಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ತನ್ನ ಅಧೀನದ ಬ್ರಾಂಚುಗಳ ಸಹಕಾರದಿಂದ ಶ್ಲಾಘನೀಯ ಕಾರ್ಯ ಚಟುವಟಿಕೆಗಳ ಮೂಲಕ ಮಾದರಿಯುತ ಕೆಲಸ ಕಾರ್ಯಗಳು ನಡೆಸಿಕೊಂಡು ಬರುತ್ತಿದ್ದು, ಮುಂದೆಯೂ ತಮ್ಮೆಲ್ಲರ ಸಹಕಾರ, ಸ್ಪಂದನೆ ಅಗತ್ಯವಾಗಿದೆ ಎಂದು ಹೇಳಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)