varthabharthi


ಕರ್ನಾಟಕ

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್. ಮೋರೆ ನಿಧನ

ವಾರ್ತಾ ಭಾರತಿ : 9 Dec, 2021


photo: @DKShivakumar
 

ಧಾರವಾಡ: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್. ಮೋರೆ ಧಾರವಾಡದ ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

82 ವರ್ಷದ ಎಸ್.ಆರ್‌. ಮೋರೆ‌ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು.

ಎಸ್. ಆರ್‌. ಮೋರೆ ಅವರು 4 ಬಾರಿ ಧಾರವಾಡದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವರಾಗಿದ್ದರು. ಧರಂಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. 

ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂತಾಪ

'ಎಸ್.ಆರ್. ಮೋರೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ನಮ್ಮ ಆತ್ಮೀಯ ಸಹೋದ್ಯೋಗಿ. ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ ಎಂದು ಅವರು ಹೇಳಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿದ್ದ ಮೋರೆ ಅವರು ಎಸ್.ಬಂಗಾರಪ್ಪ ಹಾಗೂ ಧರಂಸಿಂಗ್ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಭಿವೃದ್ಧಿ ಕಾರ್ಯಗಳ ಮೂಲಕ ಪ್ರಭಾವಿ ನಾಯಕರಾಗಿದ್ದ ಮೋರೆ ಪಕ್ಷಕ್ಕೆ ಅಪಾರ ಸೇವೆ ಸಲ್ಲಿಸಿದ್ದರು ಎಂದು ಶಿವಕುಮಾರ್ ಸ್ಮರಿಸಿದ್ದಾರೆ.

ಮೋರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)