varthabharthi


ಕರ್ನಾಟಕ

ಸರಕಾರಿ ಆಸ್ಪತ್ರೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ: ಹೈಕೋರ್ಟ್

ವಾರ್ತಾ ಭಾರತಿ : 9 Dec, 2021

ಬೆಂಗಳೂರು, ಡಿ.9: ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿ ಎಲ್ಲ ಸರಕಾರಿ ಆಸ್ಪತ್ರೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ರಾಜ್ಯದ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಸರಕಾರಿ ಆಸ್ಪತ್ರೆ ಆರಂಭಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೀದರ್‍ನ ಗುರುನಾಥ ವದ್ದೆ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. 

ಕೆಲ ಕಾಲ ವಾದ ಆಲಿಸಿದ ಪೀಠ, ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಸರಕಾರಿ ಆಸ್ಪತ್ರೆಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.  

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)