varthabharthi


ನಿಧನ

ರವೀಶ್

ವಾರ್ತಾ ಭಾರತಿ : 8 Jan, 2022

ವಿಟ್ಲ : ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಸಮೀಪದ ಮರಕಡಬೈಲ್ ನಿವಾಸಿ ರವೀಶ್ (46) ಅಲ್ಪಕಾಲದ ಆನಾರೋಗ್ಯದಿಂದ ಶನಿವಾರ ನಿಧನರಾದರು.

ಪ್ರಗತಿಪರ ಕೃಷಿಕರಾದ ಇವರು ತಾಳಿತ್ತನೂಜಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಧಾರ್ಮಿಕ, ಸಾಮಾಜಿಕ, ಶಿಕ್ಷಣ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ,  ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಎಸ್. ಮಹಮ್ಮದ್, ಉದ್ಯಮಿ ಸುಲೈಮಾನ್ ಹಾಜಿ ನಾರ್ಶ, ಹಮೀದ್ ಕುಲ್ಯಾರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)