varthabharthi


ಮಾಹಿತಿ - ಮಾರ್ಗದರ್ಶನ

​ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 14 Jan, 2022

ಉಡುಪಿ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯ ಮಹಿಳಾ ಸ್ವ-ಉದ್ಯೋಗ ಮಾರ್ಗದರ್ಶನ ಕೇಂದ್ರದ ಸಮಾಲೋಚಕರನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಂಎಸ್‌ಡಬ್ಲ್ಯೂ, ಎಂ.ಎ ಮಹಿಳಾ ಅಧ್ಯಯನ ಅಥವಾ ಸೋಶಿಯಾಲಜಿ ಇವುಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ, ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಠ 3ರಿಂದ 5 ವರ್ಷಗಳ ಅನುಭವ ಹೊಂದಿ ರುವ, ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಲು ದೈಹಿಕ ಸಾಮರ್ಥ್ಯ ಹೊಂದಿರುವ 21ರಿಂದ 50 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜ.29 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820- 2574972 ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)