ರಾಷ್ಟ್ರೀಯ
ಜ.31-ಎ.8: ಸಂಸತ್ತಿನ ಬಜೆಟ್ ಅಧಿವೇಶನ; ಫೆಬ್ರವರಿ 1ರಂದು ಬಜೆಟ್ ಮಂಡನೆ
ವಾರ್ತಾ ಭಾರತಿ : 14 Jan, 2022

ಹೊಸದಿಲ್ಲಿ, ಜ. 14: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಅವರು ಮಾತನಾಡುವ ಮೂಲಕ ಆರಂಭವಾಗಲಿದೆ ಹಾಗೂ ಎಪ್ರಿಲ್ 8ರಂದು ಅಂತ್ಯಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯ ಶಿಫಾರಸನ್ನು ಉಲ್ಲೇಖಿಸಿ ಮೂಲಗಳು ಶುಕ್ರವಾರ ತಿಳಿಸಿವೆ.
ಕೇಂದ್ರ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಈ ಅಧಿವೇಶನದ ಮೊದಲ ಭಾಗ ಫೆಬ್ರವರಿ 11ರಂದು ಅಂತ್ಯಗೊಳ್ಳಲಿದೆ. ಒಂದು ತಿಂಗಳ ಬಿಡುವಿನ ಬಳಿಕ ಅಧಿವೇಶನದ ಎರಡನೇ ಭಾಗ ಮಾರ್ಚ್ 14ರಿಂದ ಆರಂಭವಾಗಲಿದೆ ಹಾಗೂ ಎಪ್ರಿಲ್ 8ರಂದು ಅಂತ್ಯಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)