ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ಬೈ
ವಿರಾಟ್ ಕೊಹ್ಲಿ (PTI)
ಹೊಸದಿಲ್ಲಿ: ಭಾರತದ ಟ್ವೆಂಟಿ-20 ಹಾಗೂ ಏಕದಿನ ಕ್ರಿಕೆಟ್ ನಾಯಕತ್ವವನ್ನು ತ್ಯಜಿಸಿದ ಮೂರು ತಿಂಗಳೊಳಗೆ ವಿರಾಟ್ ಕೊಹ್ಲಿ ಶನಿವಾರ ಟೆಸ್ಟ್ ನಾಯಕತ್ವಕ್ಕೂ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ಕೊಹ್ಲಿ ಎಲ್ಲ ಮೂರು ಮಾದರಿಯ ಕ್ರಿಕೆಟ್ನ ನಾಯಕತ್ವದಿಂದ ಕೆಳಗಿಳಿದಿದ್ದಾರೆ.
ಸ್ಟಾರ್ ಕ್ರಿಕೆಟಿಗ ಟ್ವಿಟರ್ನ ಮೂಲಕ ಈ ನಿರ್ಧಾರವನ್ನು ಪ್ರಕಟಿಸಿದರು.
ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಭಾರತವು 1-2 ಅಂತರದಿಂದ ಸೋತ ಮರುದಿನ ಕೊಹ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಸೀಮಿತ ಓವರ್ ಕ್ರಿಕೆಟ್ನಲ್ಲಿ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾರನ್ನು ಪೂರ್ಣಕಾಲಿಕ ನಾಯಕನನ್ನಾಗಿ ಬಿಸಿಸಿಐ ಆಯ್ಕೆ ಮಾಡಿತ್ತು.
— Virat Kohli (@imVkohli) January 15, 2022
Next Story