ದ.ಕ. ಜಿಲ್ಲೆ: 782 ಮಂದಿಗೆ ಕೋವಿಡ್ ಪಾಸಿಟಿವ್; ಇಬ್ಬರು ಬಲಿ
ಮಂಗಳೂರು, ಜ.16: ದ.ಕ.ಜಿಲ್ಲೆಯಲ್ಲಿ ರವಿವಾರ 782 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇಬ್ಬರು ಬಲಿಯಾಗಿದ್ದಾರೆ.
216 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,21,775 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,16,038 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,708 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿಗೆ ಸೇರಿದ ಹಾಸ್ಟೆಲ್ನಲ್ಲಿ 65 ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆ ಮಾಡಲಾಗಿದ್ದು, ಆ ಪೈಕಿ 10 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story