ದಕ್ಷಿಣ ಕನ್ನಡ
ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವವರು ಕೇವಲ ಮೇಲ್ವರ್ಗದವರನ್ನು ಮಾತ್ರ ಓಲೈಸುವುದಲ್ಲ: ಸತ್ಯಜಿತ್ ಸುರತ್ಕಲ್

ಮಂಗಳೂರು, ಜ.16: ಕೇರಳ ರಾಜ್ಯವು ಗಣರಾಜ್ಯೋತ್ಸವ ದಿನದಂದು ನಾರಾಯಣ ಗುರು ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಕೇಂದ್ರ ಸರಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯನ್ನು ಕೈಬಿಟ್ಟಿರುವ ಕ್ರಮ ಖಂಡನೀಯ.
ಹಿಂದುತ್ವ ಹೆಸರಿನಲ್ಲಿ ರಾಜಕೀಯ ಮಾಡುವ ಸರಕಾರ ಮೇಲ್ವರ್ಗದ ಸಂತರನ್ನು ಒಲೈಸುವುದನ್ನು ಬಿಟ್ಟು ಹಿಂದುಳಿದ ವರ್ಗಗಳ ಸಂತರನ್ನೂ ಗೌರವಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ.
ಸರಕಾರದ ಈ ನಡೆಯು ಅಮಾನವೀಯ. ಸಾಮಾಜಿಕ ಕ್ರಾಂತಿಯ ಹರಿಕಾರರಾದ ನಾರಾಯಣ ಗುರು ಅವರು ಮಹಾತ್ಮಾ ಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್, ಸ್ವಾಮಿ ವಿವೇಕಾನಂದರಂತಹವರಿಂದ ಪ್ರಶಂಸನೆಗೆ ಪಾತ್ರರಾದವರು. ನಾರಾಯಣ ಗುರು ಅವರನ್ನು ಅವಮಾನಿಸುವ ಮೂಲಕ ಕೇಂದ್ರ ಸರಕಾರವು ಸಂತ ಪರಂಪರೆಗೆ ಅವಮಾನ ಮಾಡಿದೆ. ಇದರ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮತ್ತು ತಹಶೀಲ್ದಾರರ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟ ಮಾಡಲಾಗುವುದು ಎಂದು ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ