varthabharthi


ಕ್ರೀಡೆ

ವಿದೇಶದಲ್ಲಿ ನಡೆದ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್: ಸಚಿನ್ ತೆಂಡುಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ವಾರ್ತಾ ಭಾರತಿ : 19 Jan, 2022

 ಪಾರ್ಲ್, ಜ.19: ವಿರಾಟ್ ಕೊಹ್ಲಿ ವಿದೇಶದಲ್ಲಿ ನಡೆದ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿದ ಸಾಧನೆ ಮಾಡಿದರು. ಈ ಮೂಲಕ ಬ್ಯಾಟಿಂಗ್ ದಂತಕತೆ ಸಚಿನ್ ತೆಂಡುಲ್ಕರ್ ದಾಖಲೆಯನ್ನು ಮುರಿದಿದ್ದಾರೆ.

33ರ ಹರೆಯದ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಬೋಲ್ಯಾಂಡ್ ಪಾರ್ಕ್‌ನಲ್ಲಿ ಬುಧವಾರ ಆರಂಭವಾದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಈ ಸಾಧನೆ ಮಾಡಿದರು.

ಮೊದಲ ಏಕದಿನ ಪಂದ್ಯದಲ್ಲಿ 9 ರನ್ ಗಳಿಸಿದ ತಕ್ಷಣ ಕೊಹ್ಲಿ ವಿದೇಶದಲ್ಲಿ ಭಾರತದ ಪರ ಗರಿಷ್ಠ ರನ್ ಗಳಿಸಿರುವ ಸಚಿನ್ ತೆಂಡುಲ್ಕರ್(5,065 ರನ್)ದಾಖಲೆಯನ್ನು ಮುರಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)