varthabharthi


ದಕ್ಷಿಣ ಕನ್ನಡ

ಮೂಡುಬಿದಿರೆ: ರಸ್ತೆ ಅಪಘಾತ; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

ವಾರ್ತಾ ಭಾರತಿ : 20 Jan, 2022

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಗಂಟಾಲ್ಕಕಟ್ಟೆಯಲ್ಲಿ ಕಾರು- ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಯಕ್ಷಗಾನ ಕಲಾವಿದ ವೇಣೂರು ಸಮೀಪದ ವಾಮನ ಕುಮಾರ್ (47) ಎಂದು ಗುರುತಿಸಲಾಗಿದೆ. ಅವರು ಬಡಗುತಿಟ್ಟಿನ ಯಕ್ಷಗಾನ ಮೇಳದಲ್ಲಿ ಹಾಗೂ ಚಿಕ್ಕಮೇಳದಲ್ಲಿ ಯಕ್ಷ ಕಲಾವಿದನಾಗಿ ದುಡಿಯುತ್ತಿದ್ದರು.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)