varthabharthi


ಬೆಂಗಳೂರು

ಗಾಂಜಾ ಪ್ರಕರಣದಲ್ಲಿ ಸಿಎಂ ಭದ್ರತಾ ಸಿಬ್ಬಂದಿ ಬಂಧನ ಪ್ರಕರಣ: ಮತ್ತೊಂದು ಎಫ್ಐಆರ್ ದಾಖಲು

ವಾರ್ತಾ ಭಾರತಿ : 22 Jan, 2022

ಬಂಧಿತ ಆರೋಪಿಗಳು

ಬೆಂಗಳೂರು, ಜ.22: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್‍ಟಿ ನಗರದ ನಿವಾಸದ ಮುಂದೆಯೇ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. 

ಪ್ರಕರಣ ಹಳೆಯದೇ ಆದರೂ ಮಾದಕ ವಸ್ತು ಅಪರಾಧದಲ್ಲಿ ಈ ಹಿಂದೆಯೂ ಇವರ ಹಸ್ತಕ್ಷೇಪ ಇರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮತ್ತೊಂದು ಮೊಕದ್ದಮೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ನಿವಾಸದ ಬಳಿ ಗಾಂಜಾ ಮಾರಾಟ ಆರೋಪ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಆರೋಪಿಗಳಾದ ಶಿವಕುಮಾರ ಹಾಗೂ ಸಂತೋಷ್‍ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಕೋರಮಂಗಲ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಬೆದರಿಕೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮತ್ತಿಬ್ಬರು ವಶಕ್ಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಪೊಲೀಸರಿಂದ ಗಾಂಜಾ ಮಾರಾಟ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿದ ಸಿಸಿಬಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಾದ ಅಖಿಲ್ ರಾಜ್, ಅಮ್ಜದ್ ಖಾನ್ ಎಂಬುವವರನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)