ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನಕ್ಕೆ ಸಿಎಂ ಸಂತಾಪ
ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Next Story