ಬೆಂಗಳೂರು
ಗಣರಾಜ್ಯೋತ್ಸವ: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರಿಂದ ಧ್ವಜಾರೋಹಣ

ಬೆಂಗಳೂರು: ಇಲ್ಲಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
ನನ್ನ ಸರ್ಕಾರವು, ಕೋವಿಡ್-19 ರ ಪರಿಣಾಮವನ್ನು ತಗ್ಗಿಸಲು ಹಗಲಿರುಳು ಶ್ರಮಿಸಿದೆ ಮತ್ತು ಜನತೆಯ ಸಹಕಾರದೊಂದಿಗೆ ನಾವು ರ ಪರಿಣಾಮವನ್ನು ಪರಿಣಾಮಕಾರಿಯಾಗಿ ತಗ್ಗಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈ ಬಿಕ್ಕಟ್ಟನ್ನು ನಮ್ಮ ಸಾಮರ್ಥ್ಯ ವೃದ್ಧಿಸುವ ಮತ್ತು ಹೆಚ್ಚುವರಿ ಆರೋಗ್ಯ ಮೂಲ ಸೌಕರ್ಯವನ್ನು ಸೃಜಿಸುವ ಹಾಗೂ ಆಕ್ಸಿಜನ್ ಸಿಲಿಂಡರ್‌ಗಳು ಮತ್ತು ವೆಂಟಿಲೆಟರ್‌ಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಒಂದು ಅವಕಾಶವನ್ನಾಗಿ ನಾವು ಬಳಸಿಕೊಂಡಿದ್ದೇವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.


‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ