varthabharthi


ಕರ್ನಾಟಕ

ಮಾ. 3ರಿಂದ ಬೆಂಗಳೂರು ಅಂತರ್ ರಾಷ್ಟ್ರೀಯ ಚಿತ್ರೋತ್ಸವ

ವಾರ್ತಾ ಭಾರತಿ : 27 Jan, 2022

ಬೆಂಗಳೂರು, ಜ. 27: 13 ನೇ ಬೆಂಗಳೂರು ಅಂತರ್‍ರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ ಮಾಡಿದರು. 

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಸಿಎಂ ಜತೆ ಬೆಂಗಳೂರು ಅಂತರ್‍ರಾಷ್ಟ್ರೀಯ ಚಲನಚಿತ್ರೋತ್ಸವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಚಲನಚಿತ್ರೋತ್ಸವ ನಡೆಸಲು ಸಿಎಂ ಆದೇಶ ಕೊಟ್ಟಿದ್ದಾರೆ. ಭಾರತದಲ್ಲಿ ಇದು ಐದನೇ ದೊಡ್ಡ ಚಲನಚಿತ್ರೋತ್ಸವ.

ಕೋವಿಡ್ ನಿಯಮಾವಳಿ ಪಾಲಿಸಿ ಚಲನಚಿತ್ರೋತ್ಸವ ನಡೆಸುತ್ತೇವೆ. ಮಾ.3 ರಂದು 13 ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಜಿಕೆವಿಕೆಯಲ್ಲಿ ಆಯೋಜಿಸಲಾಗಿದೆ ಎಂದರು. 

ಸಭೆಯಲ್ಲಿ ತೋಟಗಾರಿಕಾ ಸಚಿವ ಮುನಿರತ್ನ, ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಂ, ಕಲಾವಿದೇ ಸುಧಾರಾಣಿ, ಕಲಾ ನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಸೋನುಗೌಡ, ಕಲಾ ನಿರ್ದೇಶಕ ನರಹರಿರಾವ್, ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆಯುಕ್ತ ಡಾ. ಪಿ.ಎಸ್.ಹರ್ಷ ಉಪಸ್ಥಿತರಿದ್ದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)