varthabharthi


ಕರ್ನಾಟಕ

ಡಿಪ್ಲೊಮಾ ವಿದ್ಯಾರ್ಥಿಗಳಿಗೆ 'ಪೂರ್ಣ ಕ್ಯಾರಿ ಓವರ್' ಗೆ ಅನುಮತಿ: ಸಚಿವ ಅಶ್ವತ್ಥನಾರಾಯಣ

ವಾರ್ತಾ ಭಾರತಿ : 28 Jan, 2022

ಬೆಂಗಳೂರು, ಜ.28: ಕೊರೋನ ಸೋಂಕು ಹಾವಳಿಯ ಹಿನ್ನೆಲೆಯಲ್ಲಿ 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 'ಪೂರ್ಣ ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 'ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ಪದ್ಧತಿ ಇದೆ. ಆದರೆ, ಕೊರೋನ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ವರ್ಷಕ್ಕೆ 'ಪೂರ್ಣ ಕ್ಯಾರಿ ಓವರ್’ಗೆ ಅವಕಾಶ ಕೊಡಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದ ಸರಕಾರಕ್ಕೆ ಆರು ಪ್ರಶ್ನೆ ಕೇಳಿದ ಕಾಂಗ್ರೆಸ್

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)