varthabharthi


ದಕ್ಷಿಣ ಕನ್ನಡ

ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣೋತ್ಸವ

ಬಂಟರು ನನಗೆ ರಾಜಕೀಯ ಶಕ್ತಿ ತುಂಬಿದರು: ಶಾಸಕ ಕಾಮತ್

ವಾರ್ತಾ ಭಾರತಿ : 28 Jan, 2022

ಮಂಗಳೂರು, ಜ.28: ಕರಾವಳಿಯಲ್ಲಿ ಆರ್ಥಿಕತೆಯನ್ನು ಹೆಚ್ಚಿಸುವ ಕೆಲಸವನ್ನು ಮುಂಬೈಯಲ್ಲಿ ನೆಲೆಸಿರುವ ಬಂಟರು ಮಾಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಬಂಟರ ಕೊಡುಗೆ ಅಪಾರವಾಗಿದೆ. ಊರಿನಲ್ಲಿ ನಡೆಯುವ ಹತ್ತಾರು ಕೆಲಸ ಕಾರ್ಯಗಳಿಗೆ ಮುಂಬೈಯಲ್ಲಿರುವ ಬಂಟರು ದೇಣಿಗೆಯನ್ನು ನೀಡುವ ಮೂಲಕ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ನನಗೆ ರಾಜಕೀಯ ಶಕ್ತಿಯನ್ನು ತುಂಬಿದವರು ಕೂಡ ಬಂಟರು. ಆ ಸಮಾಜದೊಂದಿಗೆ ಯಾವತ್ತೂ ಕೈ ಜೋಡಿಸಿ ಕೆಲಸ ಮಾಡುವುದಾಗಿ ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಬಂಟರ ಸಂಘಗಳ ಒಕ್ಕೂಟದ ವತಿಯಿಂದ ನಗರದ ಬಂಟ್ಸ್ ಹಾಸ್ಟೇಲ್‌ನ ಅಮೃತಮಹೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉದ್ಯಮಿ ಆನಂದ್ ಎಂ. ಶೆಟ್ಟಿ ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಅತಿಥಿ ಉದ್ಯಮಿ ಮುಂಬೈ ಶಶಿಧರ ಶೆಟ್ಟಿ ಇನ್ನಂಜೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರೊ.ಭಾಸ್ಕರ್ ರೈ ಕುಕ್ಕುವಳ್ಳಿ, ಯಕ್ಷಗಾನ ಅಕಾಡಮಿಯ ಸದಸ್ಯ ಕದ್ರಿ ನವನೀತ ಶೆಟ್ಟಿ, ಪತ್ರಕರ್ತರಾದ ಬಿ. ರವೀಂದ್ರ ಶೆಟ್ಟಿ, ಪ್ರದೀಪ್ ಕುಮಾರ್ ರೈ ಐಕಳ ಬಾವ, ಶಿಕ್ಷಕ ಸಾಯಿನಾಥ ಶೆಟ್ಟಿ ಮುಂಡ್ಕೂರು, ಪಿಎಚ್‌ಡಿ ಪದವಿ ಪಡೆದ ಡಾ. ಸುಧಾರಾಣಿ, ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಶಿವಾನಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಬೊಲ್ಯೊಟ್ಟು ಶಶಿಧರ ಶೆಟ್ಟಿ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಬೆಳ್ಳಂಪಳ್ಳಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ, ಗುರುಪುರ ಬಂಟರ ಸಂಘದ ಅಧ್ಯಕ್ಷ ಸಂತೋಷ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಸಮಾಜ ಕಲ್ಯಾಣ ಯೋಜನೆಯಡಿ 95 ಮಂದಿಗೆ 30 ಲಕ್ಷ ರೂ.ಪರಿಹಾರ ಧನದ ಚೆಕ್‌ನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಿತರಿಸಿದರು.

ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ ಶೆಟ್ಟಿ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ್, ಕಾರ್ಪೊರೇಟರ್ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಜೊತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ಫಲಾನುಭವಿಗಳ ಹೆಸರನ್ನು ವಾಚಿಸಿದರು. ಉದಯ ಕುಮಾರ್ ರೈ ಪ್ರಾರ್ಥನೆಗೈದರು. ಪುರುಷೋತ್ತಮ ಭಂಡಾರಿ ಅಡ್ಯಾರ್, ಶರತ್ ಶೆಟ್ಟಿ ಕಿನ್ನಿಗೋಳಿ, ಸತೀಶ್ ಅಡಪ ಸಂಕಬೈಲ್ ಸನ್ಮಾನ ಪತ್ರ ವಾಚಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರೂಪಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)