varthabharthi


ನಿಧನ

ಸವಿತಾ ಶೆಟ್ಟಿ

ವಾರ್ತಾ ಭಾರತಿ : 30 Mar, 2022

ಉಡುಪಿ : ದೊಡ್ಡಣಗುಡ್ಡೆಯ ನಿವಾಸಿ ಸವಿತಾ ಶೆಟ್ಟಿ (44) ಇವರು ಬುಧವಾರ ನಿಧನ ಹೊಂದಿದರು. ಮಾಹೆಯಲ್ಲಿ ಉದ್ಯೋಗಿಯಾಗಿದ್ದ ಇವರು ಮಲೇಷ್ಯಾದಲ್ಲಿ ಜರಗಿದ ರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ್ದರು.

ನಿಟ್ಟೂರು ಪ್ರೌಢ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಸವಿತಾ, ನವೋದಯ ಸ್ವಸಹಾಯ ಸಂಘವೂ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯ ಸಾಮಾಜಿಕ ಕಾರ್ಯಕರ್ತೆಯಾಗಿ ತೊಡಗಿಸಿಕೊಂಡಿದ್ದರು. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)