ದಕ್ಷಿಣ ಕನ್ನಡ
ಬೊಂಡಾಲ: ಯುವತಿ ಆತ್ಮಹತ್ಯೆ
ವಾರ್ತಾ ಭಾರತಿ : 14 May, 2022
ಬಂಟ್ವಾಳ, ಮೇ 14: ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 13ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬೊಂಡಾಲದಲ್ಲಿ ನಡೆದಿರುವುದು ವರದಿಯಾಗಿದೆ.
ಗೋಳ್ತಮಜಲು ಗ್ರಾಮದ ಕಲ್ಲಡ್ಕ ನಿವಾಸಿ ನಾಗವೇಣಿ ಎಂಬವರ ಪುತ್ರಿ ಮಲ್ಲಿಕಾ (32) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಮಲ್ಲಿಕಾ ಸುಮಾರು 10 ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)