varthabharthi


ಬೆಂಗಳೂರು

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿ ಅನುಮಾನಾಸ್ಪದ ಸಾವು

ವಾರ್ತಾ ಭಾರತಿ : 16 May, 2022

ಬೆಂಗಳೂರು, ಮೇ 16: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿವೊಬ್ಬನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೋಜ್ ಎಂಬಾತನ ಮೃತದೇಹ ಪತ್ತೆಯಾಗಿದೆ ಎಂದು ಕಾರಾಗೃಹದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿಗೆ ಡಕಾಯಿತಿ ಪ್ರಕರಣವೊಂದರಲ್ಲಿ ಚಾಮರಾಜಪೇಟೆ ಪೊಲೀಸರು ಮನೋಜ್‍ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈತ ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಮೂರು-ನಾಲ್ಕು ಬಾರಿ ಜೈಲು ಸೇರಿದ್ದ. ಸಕ್ರಿಯ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್‍ನ ಕೊಠಡಿವೊಂದರಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮನೋಜ್ ಮೃತದೇಹ ಸೋಮವಾರ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಲ್ಲದೆ, ಜಾಮೀನಿಗೆ ಕುಟುಂಬಸ್ಥರು ಹಿಂದೇಟು ಹಾಕುತ್ತಿದ್ದರು. ಇದರ ಜೊತೆಗೆ ಮನೋಜ್ ಖಿನ್ನತೆಯಿಂದ ಬಳಲುತ್ತಿದ್ದನು ಎಂದು ಹೇಳಲಾಗುತ್ತಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)