PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಹದಿನೈದು ಅಭ್ಯರ್ಥಿಗಳ ಜಾಮೀನು ಅರ್ಜಿ ಕೋರ್ಟ್ನಿಂದ ವಜಾ
ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 22: ಪಿಎಸ್ಸೈ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ 15 ಅಭ್ಯರ್ಥಿಗಳ ಜಾಮೀನು ಅರ್ಜಿಯನ್ನು ನಗರದ 1ನೆ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಮಧ್ಯವರ್ತಿಗಳು ಸೇರಿ ಹದಿನೈದು ಮಂದಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, 15 ಜನರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಪ್ರಭಾವಿ ರಾಜಕಾರಣಿಗಳ ಆಪ್ತರು ಅಕ್ರಮದಲ್ಲಿ ಶಾಮೀಲಾಗಿರುವ ಸುಳಿವು ಸಿಕ್ಕಿದೆ. ಸದ್ಯದಲ್ಲೇ ಇನ್ನಷ್ಟು ಜನರನ್ನು ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
Next Story