varthabharthi


ರಾಷ್ಟ್ರೀಯ

ಮುಂಜಾನೆ ಮಳೆಗೆ ರಾಷ್ಟ್ರ ರಾಜಧಾನಿ ತತ್ತರ; ವಾಯುಸಂಚಾರ ವ್ಯತ್ಯಯ

ವಾರ್ತಾ ಭಾರತಿ : 23 May, 2022

Photo: PTI 

ಹೊಸದಿಲ್ಲಿ: ಸೋಮವಾರ ಮುಂಜಾನೆ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಗಾಳಿ ಸಹಿತ ಮಳೆ ಆದ ಕಾರಣ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತು. ಹಲವು ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಪ್ರತಿಕೂಲ ಹವಾಮಾನದಿಂದಾಗಿ ವಾಯು ಸಂಚಾರ ವ್ಯತ್ಯಯವಾಗಿದೆ ಎಂದು ವಿಮಾನಯಾನ ಸಂಸ್ಥೆಗಳು ಟ್ವೀಟ್ ಮಾಡಿವೆ.

ಮುಂಜಾನೆ ಮಳೆಯಿಂದಾಗಿ ದೆಹಲಿಯಲ್ಲಿ ತಾಪಮಾನ ಮತ್ತಷ್ಟು ಇಳಿಯಲು ಕಾರಣವಾಗಿದ್ದು, ಭಯಾನಕ ಉಷ್ಣಮಾರುತದಿಂದ ಕಂಗೆಟ್ಟಿದ್ದ ಜನರಿಗೆ ನೆಮ್ಮದಿ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನ, ಮಳೆಯೊಂದಿಗೆ ವಾರ ಆರಂಭದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಮುಂಜಾನೆ ವೇಳೆ ವಾಹನ ಸಂಚಾರ ವ್ಯತ್ಯಯಕ್ಕೂ ಕಾರಣವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)